alex Certify ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ಮಾಜಿ ಮೇಲಾಧಿಕಾರಿ ವಿರುದ್ಧ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ಮಾಜಿ ಮೇಲಾಧಿಕಾರಿ ವಿರುದ್ಧ ಕೇಸ್ ದಾಖಲು

ಚೆನ್ನೈ: ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡು ಪೊಲೀಸ್ ಅಪರಾಧ ವಿಭಾಗ – ಸಿಐಡಿಯಿಂದ ಮಾಜಿ ವಿಶೇಷ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಮಹಿಳಾ ಕಿರುಕುಳ ನಿಷೇಧ, ಮಹಿಳಾ ಕಿರುಕುಳ ತಡೆ ಕಾಯ್ದೆ ಸೇರಿದಂತೆ ವಿವಿಧ ಪ್ರಕರಣಗಳಡಿ ರಾಜೇಶ್ ದಾಸ್ ವಿರುದ್ಧ ಕೇಸ್ ದಾಖಲಾಗಿದೆ. ರಾಜೇಶ್ ದಾಸ್ ಅವರ ವಿರುದ್ಧ ದೂರು ದಾಖಲಿಸಲು ಚೆನ್ನೈಗೆ ತೆರಳುತ್ತಿದ್ದ ಮಹಿಳಾ ಐಪಿಎಸ್ ಅಧಿಕಾರಿಯನ್ನು ತಡೆಯಲು ಮತ್ತೊಬ್ಬ ಪೊಲೀಸ್ ವರಿಷ್ಠಾಧಿಕಾರಿ ಪ್ರಯತ್ನಿಸಿದ್ದಾರೆ.

ತನ್ನ ಉನ್ನತ ಅಧಿಕಾರಿಯಾಗಿದ್ದ ರಾಜೇಶ್ ದಾಸ್ ಅವರ ಆದೇಶದ ಮೇರೆಗೆ ಪೊಲೀಸ್ ವರಿಷ್ಠಾಧಿಕಾರಿ ಹೀಗೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಮಹಿಳಾ ಅಧಿಕಾರಿ ದೂರಿನ ನಂತರ ರಾಜೇಶ್ ದಾಸ್ ಅವರು ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಮಹಿಳಾ ಐಪಿಎಸ್ ಅಧಿಕಾರಿ ಮಾಡಿದ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಇಲಾಖೆಗೆ ನಿರ್ದೇಶನ ನೀಡಿ ತಮಿಳುನಾಡು ಡಿಜಿಪಿ ಜೆ.ಕೆ. ತ್ರಿಪಾಠಿ ಆದೇಶ ಹೊರಡಿಸಿದ ಒಂದು ದಿನದ ನಂತರ ಸಿಬಿ -ಸಿಐಡಿ ಪ್ರಕರಣ ದಾಖಲಿಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...