ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಚಾಕುರ್ಕರ್ ಅವರ 81 ವರ್ಷದ ಸಂಬಂಧಿ ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ಅವರ ನಿವಾಸದಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹನುಮಂತರಾವ್ ಪಾಟೀಲ್ ಎಂದೂ ಕರೆಯಲ್ಪಡುವ ಚಂದ್ರಶೇಖರ್ ಅವರು ಬೆಳಿಗ್ಗೆ 8:30 ರ ಸುಮಾರಿಗೆ ಪರವಾನಗಿ ಪಡೆದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಮೃತರು ಮಾಜಿ ಕೇಂದ್ರ ಗೃಹ ಸಚಿವ -ಲೋಕಸಭೆ ಸ್ಪೀಕರ್ ಶಿವರಾಜ್ ಪಾಟೀಲ್ ಅವರ ಸೋದರ ಸಂಬಂಧಿಯಾಗಿದ್ದಾರೆ. ಹನುಮಂತರಾವ್ ಅವರು ಮಾಜಿ ಸಚಿವರ ‘ದೇವಘರ್’ ನಿವಾಸದ ಸಮೀಪದಲ್ಲಿ ವಾಸಿಸುತ್ತಿದ್ದರು ಮತ್ತು ಆಗಾಗ್ಗೆ ಭೇಟಿ ನೀಡುತ್ತಿದ್ದರು. ಅವರು ಹಲವಾರು ವರ್ಷಗಳಿಂದ ಕಾಯಿಲೆಗಳಿಂದ ಬಳಲುತ್ತಿದ್ದರು ಎಂಬುದು ಗೊತ್ತಾಗಿದೆ.