alex Certify BREAKING: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಕೋವಿಡ್ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಕೋವಿಡ್ ಪಾಸಿಟಿವ್

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ಭಾನುವಾರ ಕೋವಿಡ್ -19 ಪರೀಕ್ಷೆ ಮಾಡಿಸಿದ್ದು ಪಾಸಿಟಿವ್ ವರದಿ ಬಂದಿದೆ. ಗಂಟಲು ನೋವು ಹೊರತಾಗಿ ಅವರ ಆರೋಗ್ಯ ಉತ್ತಮವಾಗಿದೆ.

ನನಗೆ ಒಂದೆರಡು ದಿನಗಳಿಂದ ಗಂಟಲು ಕಡಿತ ಇದೆ, ಆದರೆ ನಾನು ಚೆನ್ನಾಗಿದ್ದೇನೆ ಎಂದು ಒಬಾಮಾ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಮಿಚೆಲ್ ಮತ್ತು ನಾನು ಲಸಿಕೆಯನ್ನು ಪಡೆದುಕೊಂಡಿದ್ದೇವೆ. ಇದಕ್ಕಾಗಿ ಕೃತಜ್ಞರಾಗಿದ್ದೇವೆ. ಮಿಚೆಲ್ ಅವರಿಗೆ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಅವರು ಹೇಳಿದ್ದಾರೆ.

ನೀವು ಲಸಿಕೆ ಪಡೆದುಕೊಳ್ಳದಿದ್ದರೆ ಲಸಿಕೆ ಪಡೆಯಿರಿ. ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ ಸಹ ಲಸಿಕೆ ಹಾಕಿಸಿಕೊಳ್ಳಬೇಕೆಂದು ಅವರು ಸಲಹೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...