ಲಖ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರು ಶನಿವಾರ ಲಖ್ನೋದಲ್ಲಿರುವ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(SGPGI) ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆಯಿಂದ ಮಾಹಿತಿ ನೀಡಲಾಗಿದೆ. ಸೋಂಕಿನಿಂದಾಗಿ ಮತ್ತು ಪ್ರಜ್ಞೆ ಕಡಿಮೆಯಾದ ಕಾರಣ ಜುಲೈ 4 ರಂದು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ(ಐಸಿಯು) ಅವರನ್ನು ದಾಖಲಿಸಲಾಗಿತ್ತು.
ಮೊದಲಿಗೆ ಅವರು ಇಲ್ಲಿ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 89 ವರ್ಷದ ಹಿರಿಯ ನಾಯಕ ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಲ್ಯಾಣ್ ಸಿಂಗ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.