ಬೆಂಗಳೂರು : ಕೆಪಿಸಿಸಿ (KPCC) ವೆಬ್ಸೈಟ್ ಹ್ಯಾಕ್ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಿಡಿಗೇಡಿಗಳು ಕೆಪಿಸಿಸಿ ವೆಬ್ಸೈಟ್ ಹ್ಯಾಕ್ ಮಾಡಿ ನಕಲಿ ವೆಬ್ ಸೈಟ್ ಸೃಷ್ಟಿಸಿ ಪೋಸ್ಟ್ ಅನಧಿಕೃತ ಪೋಸ್ಟ್ ಹಾಕಿದ್ದರು. ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳನ್ನು ಧರ್ಮೇಶ್ ಜೂನ್, ಅರುಣ್, ಸಿದ್ದಾರ್ಥ ಮತ್ತು ವೆಂಕಟೇಶ್ ಎಂದು ಗುರುತಿಸಲಾಗಿದೆ.
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸುತ್ತಿದ್ದರೆ ಇತ್ತ ಕಿಡಿಗೇಡಿಗಳು ವೆಬ್ಸೈಟ್ ಹ್ಯಾಕ್ ಮಾಡಿ ಪೋಸ್ಟ್ ಒಂದನ್ನು ಮಾಡಿದ್ದರು. ಈ ಸಂಬಂಧ ಕಾಂಗ್ರೆಸ್ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿತ್ತು, ಅಂತೆಯೇ ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.