
ಅಮರಾವತಿ: ಪ್ರಯಾಣಿಕರ ಬಸ್ ವೊಂದು 70 ಅಡಿ ಆಳದ ಕಂದಕ್ಕೆ ಉರುಳಿ ಬಿದಿದ್ದು, ನಾಲ್ವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ.
ಸುಮಾರು 50-55 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಅಮರಾವತಿಯ ಮೇಲ್ಘಾಟ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕಂದಕ್ಕೆ ಉರುಳಿ ಬಿದ್ದಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಚಿಕಲ್ದಾರ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.