ಮಂಡ್ಯ : ಮಂಡ್ಯ ಜಿಲ್ಲೆಯಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಶಾಲಾ ನಾಲೆಯಲ್ಲಿ ಕಾರು ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಪೈಕಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಮೃತ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ನಾಲ್ವರು ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಹಾಗೂ ಸಚಿವ ಚಲುವರಾಯಸ್ವಾಮಿ ವೈಯಕ್ತಿಕವಾಗಿ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಶಾಲಾ ನಾಲೆಯಲ್ಲಿ ಕಾರು ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಪೈಕಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಮೃತ ಮಹಿಳೆಯರನ್ನು ಟಿ. ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕಾರದ ರೇಖಾ, ಸಂಜನಾ, ಮಹದೇವಿ ಎಂದು ಗುರುತಿಸಲಾಗಿದೆ.
ಗಾಮನಹಳ್ಳಿ ಗ್ರಾಮದ ಹೊರವಲಯದ ತುರಗನೂರು ಶಾಖಾ ನಾಲೆ ಬಳಿಯ ತಿರುವಿನಲ್ಲಿ ಕಾರು ಕಬ್ಬಿಣದ ತಡೆಗೊಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲೆಗೆ ಕಾರು ಬಿದ್ದಿದೆ. ಈ ವೇಳೆ ಚಾಲಕ ಮನೋಜ್ ಅದೃಷ್ಟವಶಾತ್ ಈಜಿ ದಡ ಸೇರಿದ್ದು, ಉಳಿದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ನಾಲೆಯಿಂದ ನಾಲ್ವರು ಮಹಿಳೆಯರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.