ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯ ಛಾಟಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ.
ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿದ ನಾಲ್ವರು ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಡಿಸೆಂಬರ್ 3 ರಂದು ಯುವತಿರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ಬಲವಂತವಾಗಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಬೈರಾಮನಗರ್ ರಸ್ತೆಯಲ್ಲಿ ಅತ್ಯಾಚಾರ ಎಸಗಿದ್ದು, ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. ಅಲ್ಲದೇ, ಯಾರಿಗಾದರೂ ವಿಷಯ ತಿಳಿಸಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಎರಡು ದಿನಗಳ ನಂತರ ಯುವತಿ ಮನೆಗೆ ಬಂದಿದ್ದ ಮುಖ್ಯ ಆರೋಪಿ ಪೊಲೀಸರಿಗೆ ದೂರು ನೀಡಿದರೆ ಕುಟುಂಬದವರನ್ನು ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಹೇಳಲಾಗಿದ್ದು, ಯುವತಿ ಛಾಟಾರಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದು, ಆತ ತಾನು ಕೃತ್ಯದಲ್ಲಿ ಭಾಗಿಯಾಗಿಲ್ಲವೆಂದು ವಿಚಾರಣೆ ವೇಳೆ ತಿಳಿಸಿದ್ದಾನೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಬುಲಂದ್ ಶಹರ್ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.