
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸೂಚನೆಯನ್ನೂ ಮೀರಿ ನಾಲವರು ಸಚಿವರು ಗೃಹ ಸಚಿವರ ಕೊಠಡಿಯಲ್ಲಿ ರಹಸ್ಯೆ ಸಭೆ ನಡೆಸಿರುವುದು ಮತ್ತೆ ಚರ್ಚೆಗೆ ಕಾರಣವಾಗಿದೆ.
ಈ ಹಿಂದೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಆಯೋಜಿಸಿದ್ದ ಡಿನ್ನರ್ ಮೀಟಿಂಗ್ ರಾಜ್ಯ ಕಾಂಗ್ರೆಸ್ ನಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ವಿಪಕ್ಷಗಳ ಟೀಕೆಗೂ ಅಸ್ತ್ರವಾಗಿತ್ತು. ಇದರ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಡಿನ್ನರ್ ಮೀಟಿಂಗ್ ಹೈಕಮಂಡ್ ಸೂಚನೆ ಮೇರೆಗೆ ರದ್ದುಗೊಳಿಸಲಾಗಿತ್ತು. ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಚಿವರು, ಶಾಸಕರು ಯಾವುದೇ ಪ್ರತ್ಯೇಕ ಸಭೆಗಳನ್ನು, ಡಿನ್ನರ್ ಮೀಟಿಂಗ್ ಗಳನ್ನು ನಡೆಸುವಂತಿಲ್ಲ ಎಂದು ವರನಿಂಗ್ ಕೊಟ್ಟಿದ್ದರು. ಆದಾಗ್ಯೂ ಈಗ ನಾಲ್ವರು ಸಚಿವರು ಪ್ರತೇಕ ಸಭೆ ನಡೆಸುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
ವಿಧಾನಸೌಧದಲ್ಲಿ ಗೃಹ ಸಚಿವರ ಕೊಠಡಿಯಲ್ಲಿ ಸಚಿವ ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಸಿ.ಮಹದೇವಪ್ಪ ರಹಸ್ಯ ಸಭೆ ನಡೆಸಿದ್ದಾರೆ. ಈ ವೇಳೆ ಪ್ರಸನ್ನಾನಂದ ಸ್ವಾಮೀಜಿ ಕೂಡ ಉಪಸ್ಥಿತರಿದ್ದರು. ನಾಲ್ವರು ಸಚಿವರ ಪ್ರತ್ಯೇಕ ಸಭೆ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಕಾರಣವಗಿದೆ.