ಚೆನ್ನೈ: ಪ್ರಮುಖ ಬೆಳವಣಿಗೆಯೊಂದರಲ್ಲಿ ತೈವಾನ್ ನ ಫಾಕ್ಸ್ ಕಾನ್ ಸೋಮವಾರ 6,000 ಉದ್ಯೋಗಗಳನ್ನು ಸೃಷ್ಟಿಸುವ ಹೊಸ ಮೊಬೈಲ್ ತಯಾರಿಕಾ ಘಟಕ ಸ್ಥಾಪಿಸಲು ಒಪ್ಪಂದ ಪತ್ರಕ್ಕೆ(LOI) ಸಹಿ ಹಾಕಿದೆ. ತಮಿಳುನಾಡಿನ ಕಾಂಚೀಪುರಂನಲ್ಲಿ 1,600 ಕೋಟಿ ರೂ. ಹೂಡಿಕೆ ಮಾಡಲಿದೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಉಪಸ್ಥಿತಿಯಲ್ಲಿ ತಮಿಳುನಾಡು ರಾಜ್ಯ ಸರ್ಕಾರ ಮತ್ತು ಫಾಕ್ಸ್ ಕಾನ್ ಅಧ್ಯಕ್ಷ ಯಂಗ್ ಲಿಯು ಪ್ರತಿನಿಧಿಸುವ ಫಾಕ್ಸ್ ಕಾನ್ ಗ್ರೂಪ್ ನಡುವೆ ಸಹಿ ಹಾಕಲಾಗಿದೆ.
ಹೊಸ ಒಪ್ಪಂದವು ಕನಿಷ್ಠ 6,000 ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಸಾಮರ್ಥ್ಯವನ್ನು ಹೊಂದಿದೆ.
ನಾವು ಇವಿ ಮತ್ತು ಎಲೆಕ್ಟ್ರಾನಿಕ್ ಘಟಕಗಳಲ್ಲಿ ಹೆಚ್ಚಿನ ಹೂಡಿಕೆಗಳ ಬಗ್ಗೆ ಚರ್ಚಿಸಿದ್ದೇವೆ. ತಮಿಳುನಾಡನ್ನು ಏಷ್ಯಾದ ಹೊಸ ಉದಯೋನ್ಮುಖ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ನಮ್ಮ ಮಹತ್ವಾಕಾಂಕ್ಷೆಯಾಗಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.
https://twitter.com/mkstalin/status/1685936581302255616