
ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರಿಗೆ ಗಾಳ ಹಾಕಿ ಲೈಂಗಿಕವಾಗಿ ಬಳಸಿಕೊಂಡು ಹಣ ದೋಚುತ್ತಿದ್ದ ವಿಕೃತಕಾಮಿಯನ್ನು ಮೈಸೂರಿನ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಸವಟ್ಟಿಗೆ ಗ್ರಾಮದ ಶಿವಪ್ರಕಾಶ್ ಬಂಧಿತ ಆರೋಪಿ. ಸಾಮಾಜಿಕ ಜಾಲತಾಣ ಫೇಸ್ಬುಕ್, ಗೂಗಲ್ ಮೀಟ್ ನಲ್ಲಿ ಯುವತಿಯರನ್ನು ಬಲೆಗೆ ಬೀಳಿಸಿಕೊಂಡು ಲೈಂಗಿಕವಾಗಿ ಶೋಷಿಸುತ್ತಿದ್ದ. ಅವರಿಂದ ಹಣ ಕೇಳುತ್ತಿದ್ದ ಎನ್ನಲಾಗಿದೆ.
ಮೈಸೂರು ಮೂಲದ ಯುವತಿಯೊಂದಿಗೆ ಪ್ರೀತಿಸುವ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡು 20 ಲಕ್ಷ ರೂಪಾಯಿವರೆಗೂ ಹಣ ಪಡೆದುಕೊಂಡಿದ್ದ. ನೊಂದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿ ಶಿವಪ್ರಕಾಶನನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆನ್ನಲಾಗಿದೆ.