alex Certify ಜಾಲತಾಣದಲ್ಲಿ ಗಾಳ ಹಾಕಿ ದೈಹಿಕ ಸಂಬಂಧ ಬೆಳೆಸಿ ಹಣ ಕೀಳುತ್ತಿದ್ದ ವಿಕೃತಕಾಮಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಲತಾಣದಲ್ಲಿ ಗಾಳ ಹಾಕಿ ದೈಹಿಕ ಸಂಬಂಧ ಬೆಳೆಸಿ ಹಣ ಕೀಳುತ್ತಿದ್ದ ವಿಕೃತಕಾಮಿ ಅರೆಸ್ಟ್

ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರಿಗೆ ಗಾಳ ಹಾಕಿ ಲೈಂಗಿಕವಾಗಿ ಬಳಸಿಕೊಂಡು ಹಣ ದೋಚುತ್ತಿದ್ದ ವಿಕೃತಕಾಮಿಯನ್ನು ಮೈಸೂರಿನ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಸವಟ್ಟಿಗೆ ಗ್ರಾಮದ ಶಿವಪ್ರಕಾಶ್ ಬಂಧಿತ ಆರೋಪಿ. ಸಾಮಾಜಿಕ ಜಾಲತಾಣ ಫೇಸ್ಬುಕ್, ಗೂಗಲ್ ಮೀಟ್ ನಲ್ಲಿ ಯುವತಿಯರನ್ನು ಬಲೆಗೆ ಬೀಳಿಸಿಕೊಂಡು ಲೈಂಗಿಕವಾಗಿ ಶೋಷಿಸುತ್ತಿದ್ದ. ಅವರಿಂದ ಹಣ ಕೇಳುತ್ತಿದ್ದ ಎನ್ನಲಾಗಿದೆ.

ಮೈಸೂರು ಮೂಲದ ಯುವತಿಯೊಂದಿಗೆ ಪ್ರೀತಿಸುವ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡು 20 ಲಕ್ಷ ರೂಪಾಯಿವರೆಗೂ ಹಣ ಪಡೆದುಕೊಂಡಿದ್ದ. ನೊಂದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿ ಶಿವಪ್ರಕಾಶನನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...