
ಬೆಂಗಳೂರು: ವಂಚಕರಿಗೆ ಇತ್ತೀಚಿನ ದಿನಗಳಲ್ಲಿ ಯಾವುದೇ ಭಯ-ಭೀತಿ ಎಂಬುದೇ ಇಲ್ಲದಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಆಪ್ತರ ಹೆಸರಲ್ಲಿ ವಂಚಕನೊಬ್ಬ ಅಧಿಕಾರಿಗಳನ್ನೇ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ತುಮಕೂರು ಮೂಲದ ರಘುನಾಥ್ ಬಂಧಿತ ಆರೋಪಿ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರ ಆಸ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ರಘುನಾಥ್, ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆಯುತ್ತಿದ್ದ.
ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಹೇಳಿಕೊಂಡು ರಘುನಾಥ್, ಇಂಜಿನಿಯರ್ ಓರ್ವರಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ 2 ಲಕ್ಷ ರೂ ಬೇಡಿಕೆ ಇಟ್ಟಿದ್ದ. ಈತನ ಮಾತು ನಂಬಿದ ಇಂಜಿನಿಯರ್ 80 ಸಾವಿರ ಹಣ ಕೊಟ್ಟಿದ್ದಾರೆ. ಬಳಿಕ ಈತನ ವಂಚನೆ ಬಗ್ಗೆ ತಿಳಿದು ದೂರು ದಾಖಲಿಸಿದ್ದರು.
ಸದ್ಯ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.