alex Certify ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ ವಂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ ವಂಚನೆ

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ 80 ಸಾವಿರ ರೂ. ವಂಚಿಸಿದ ಘಟನೆ ನಡೆದಿದ್ದು, ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ವಿದೇಶದಲ್ಲಿ ಉದ್ಯೋಗಕ್ಕಾಗಿ ನೌಕರಿ.ಡಾಟ್ ಕಾಂ ಮೂಲಕ ಪುಷ್ಪಾ ಎಂಬುವರು ಅರ್ಜಿ ಸಲ್ಲಿಸಿದ್ದು, ಅವರಿಗೆ ಉದ್ಯೋಗ ನೀಡದೆ 80 ಸಾವಿರ ರೂಪಾಯಿ ಮರಳಿಸದೆ ಅಪರಿಚಿತರು ವಂಚಿಸಿದ್ದಾರೆ. ಮೊಬೈಲ್ ಗೆ ಬಂದಿದ್ದ ಸಂದೇಶದಲ್ಲಿದ್ದ ಮೊಬೈಲ್ ಸಂಖ್ಯೆಗೆ ಪುಷ್ಪಾ ಕರೆ ಮಾಡಿದಾಗ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದಾರೆ.

ವೀಸಾ ಪ್ರೊಸೆಸ್, ಮೆಡಿಕಲ್ ಫಿಟ್ನೆಸ್ ಮೊದಲಾದವುಗಳಿಗೆಂದು ಕ್ಯೂಆರ್ ಕೋಡ್ ಕಳಿಸಿದ್ದು, ಅದನ್ನು ಸ್ಕ್ಯಾನ್ ಮಾಡಿ ಗೂಗಲ್ ಪೇ ಮೂಲಕ ಹಣ ವರ್ಗಾಯಿಸಲಾಗಿದೆ. ವಂಚನೆಗೊಳಗಾದ ಪುಷ್ಪಾ ಅವರು ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...