ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯತ್ವ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ 4.10 ಕೋಟಿ ರೂಪಾಯಿ ವಂಚಿಸಿದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶ ಪತ್ರ ಸೃಷ್ಟಿಸಿ ವಂಚಿಸಲಾಗಿದೆ. ವಂಚನೆಗೊಳಗಾದ.ಕಲಬುರಗಿ ಮೂಲದ ಶಿಕ್ಷಕಿ ನೀಲಮ್ಮ ಎಂ. ಬೆಳಮಗಿ ಅವರು ನೀಡಿದ ದೂರಿನ ಮೇರೆಗೆ ತಾವರೆಕೆರೆ ರಿಜಾ್ ಅಹಮ್ಮದ್, ಮೂಡಿಗೆರೆ ತೋಟಗಾರಿಕಾ ಸಹಾಯಕ ಅಧಿಕಾರಿ ಚಂದ್ರಪ್ಪ, ಕನಕಪುರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ರುದ್ರೇಶ್ ಮತ್ತು ಯೂಸೂಫ್ ಎಂಬುವರನ್ನು ಬಂಧಿಸಲಾಗಿದೆ.
ಮೂವರು ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಕೆಪಿಎಸ್ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿದ್ದು, ಹಂತ ಹಂತವಾಗಿ 4.10 ಕೋಟಿ ರೂ. ಪಡೆದುಕೊಂಡಿದ್ದರು. ನಕಲಿ ನೇಮಕಾತಿ ಆದೇಶ ಪತ್ರ ಸೃಷ್ಟಿಸಿದ್ದರು ಎನ್ನಲಾಗಿದೆ.