alex Certify ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಪೊಲೀಸ್ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಪೊಲೀಸ್ ವಿರುದ್ಧ ಎಫ್ಐಆರ್

ಮೈಸೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಪೊಲೀಸ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚಿಸಿದ ಆರೋಪ ಕೇಳಿಬಂದಿದೆ.

ಬನ್ನೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾಗ ಪರಿಚಯಿಸಿಕೊಂಡ ಪೊಲೀಸ್ ಮಹಿಳೆಗೆ ವಿಚ್ಛೇದನ ಕೊಡಿಸಿದ್ದರು. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೇ, ನಂತರ ಗರ್ಭಪಾತ ಮಾಡಿಸಿದ್ದು, ಮದುವೆಯಾಗಲು ನಿರಾಕರಿಸಿ ಮಗನೊಂದಿಗೆ ಸೇರಿ ಹಲ್ಲೆ ನಡೆಸಿರುವುದಾಗಿ ಮಹಿಳೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...