
ಬೆಂಗಳೂರು: ರಾಜ್ಯದ ಮೈಸೂರು, ಕಲಬುರಗಿ, ಹುಬ್ಬಳ್ಳಿ ಹಾಗೂ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಅಸ್ಥಿಮಜ್ಜೆ ಕಸಿ(ಬೋನ್ ಮ್ಯಾರೊ) ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನನಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿಯನ್ನು ಸೇರ್ಪಡೆ ಮಾಡಲಾಗಿದೆ. ಬಿಪಿಎಲ್ ಕುಟುಂಬ ಸದಸ್ಯರಿಗೆ ಉಚಿತ ಚಿಕಿತ್ಸೆ ಸಿಗಲಿದೆ. ಹುಬ್ಬಳ್ಳಿ, ಮೈಸೂರು, ಕಲಬುರಗಿ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಬೋನ್ ಮ್ಯಾರೊ ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.