ಸಿರುಗುಪ್ಪ: ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ನೀಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಶಾಲಾ ವಿದ್ಯಾರ್ಥಿಗಳು, ಗಾರ್ಮೆಂಟ್ಸ್ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ ನೀಡಿದ್ದು, ಇದೇ ರೀತಿ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು ಸಚಿವರು ಹೇಳಿದ್ದಾರೆ. ಸಾರಿಗೆ ನೌಕರರಿಗೆ ಮುಂದಿನ ದಿನಗಳಲ್ಲಿ ನಿಗದಿತ ಸಮಯಕ್ಕೆ ವೇತನ ಜಮಾ ಮಾಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದರು.