ಬೆಂಗಳೂರು: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಬಂಪರ್ ಕೊಡುಗೆ ನೀಡಿರುವ ಸರ್ಕಾರ ಇದರೊಂದಿಗೆ ಉಚಿತ ಪ್ರಯಾಣಕ್ಕೆ ರಿಸರ್ವೇಶನ್ ಕಲ್ಪಿಸುವ ಕುರಿತು ಮೂರ್ನಾಲ್ಕು ದಿನಗಳಲ್ಲಿ ಮಾರ್ಗ ಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಕೆಎಸ್ಆರ್ಟಿಸಿ ನಾಲ್ಕು ನಿಗಮಗಳ ಸಾಮಾನ್ಯ ಮತ್ತು ವೇಗದೂತ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ದೂರದ ಊರುಗಳಿಗೆ ಪ್ರಯಾಣಿಸುವ ಮಹಿಳೆಯರಿಗೆ ಸೀಟುಗಳನ್ನು ಮುಂಗಡವಾಗಿ ಕಾಯ್ದಿರಿಸುವ ಅವಕಾಶ ನೀಡುವ ಬಗ್ಗೆಯೂ ಚಿಂತನೆ ನಡೆದಿದ್ದು, ಈಗಾಗಲೇ ಕೆಎಸ್ಆರ್ಟಿಸಿ ಸೇರಿದಂತೆ ಮೂರು ನಿಗಮಗಳ ಅಧಿಕಾರಿಗಳು ಸಾಮಾನ್ಯ ಮತ್ತು ವೇಗದೂತ ಬಸ್ ಗಳಲ್ಲಿ ಮಹಿಳೆಯರಿಗೆ ಸೀಟುಗಳನ್ನು ಕಾಯ್ದಿರಿಸಲು ಅನುಸರಿಸಬೇಕಾದ ನಿಯಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕ್ರಮಿಸಬೇಕಿರುವ ದೂರ ಮತ್ತು ದಾಖಲೆಗಳು, ಅರ್ಹತೆ ಒಳಗೊಂಡ ಅಗತ್ಯ ಮಾರ್ಗ ಸೂಚಿಗಳನ್ನು ಮೂರ್ನಾಲ್ಕು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.