alex Certify Free Bus Service : ರಾಜ್ಯದ ಮಹಿಳೆಯರ ಗಮನಕ್ಕೆ : ಉಚಿತವಾಗಿ ಪ್ರಯಾಣಿಸಲು ‘ಒರಿಜಿನಲ್ ID’ ಬೇಕಿಲ್ಲ, ಜೆರಾಕ್ಸ್ ಇದ್ರೆ ಸಾಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Free Bus Service : ರಾಜ್ಯದ ಮಹಿಳೆಯರ ಗಮನಕ್ಕೆ : ಉಚಿತವಾಗಿ ಪ್ರಯಾಣಿಸಲು ‘ಒರಿಜಿನಲ್ ID’ ಬೇಕಿಲ್ಲ, ಜೆರಾಕ್ಸ್ ಇದ್ರೆ ಸಾಕು

ಬೆಂಗಳೂರು : ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ಮುಂದೆ ಒರಿಜಿನಲ್ ಐಡಿ ಬೇಕಿಲ್ಲ, ನಕಲು ಪ್ರತಿಯಿದ್ದರೂ ಪ್ರಯಾಣಿಸಬಹುದು ಎಂದು ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.

ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ವುರಾವೆಗಾಗಿ ತೋರಿಸಬೇಕಾದ ದಾಖಲಾತಿಗಳಲ್ಲಿ ಮೂಲ ಗುರುತಿನ ಚೀಟಿ ಅಥವಾ ಡಿಜಿಲಾಕರ್(Digilocker) ಮುಖಾಂತರ ಹಾಜರುಪಡಿಸಬೇಕಾಗಿರುತ್ತದೆ ಎಂದು ತಿಳಿಸಲಾಗಿರುತ್ತದೆ. ಅದಾಗ್ಯೂ, ಮಹಿಳಾ ಪ್ರಯಾಣಿಕರ ಅನುಕೂಲಕ್ಕಾಗಿ ಉಲ್ಲೇಖಿತ ಆದೇಶದಲ್ಲಿ ನಮೂದಿಸಿರುವ ಗುರುತಿನ ಚೀಟಿಗಳ ನಕಲು ಪ್ರತಿಯನ್ನು ಸಹ ಮಾನ್ಯ ಮಾಡಲು ನಿರ್ಧರಿಸಿದೆ.

ಮಹಿಳಾ ಪ್ರಯಾಣಿಕರು ತಮ್ಮ ಪ್ರಯಾಣದ ಸಮಯದಲ್ಲಿ ಆದೇಶದಲ್ಲಿ ನಿಗದಿಪಡಿಸಲಾಗಿರುವ ಗುರುತಿನ ಚೀಟಿಗಳ ಮೂಲ/ನಕಲು/ಡಿಜಿಲಾಕರ್ (ಹಾರ್ಡ್ ಮತ್ತು ಸಾಫ್ಟ್ ಕಾಪಿ ) ಮಾದರಿಯಲ್ಲಿ ಹಾಜರುಪಡಿಸಿ ಪುಯಾಣಿಸಲು ಅನುಮತಿಸಿದೆ.ಇನ್ನುಳಿದಂತೆ ಸಾಮಾನ್ಯ ಸ್ಥಾಯಿ ಆದೇಶದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...