alex Certify Free Bus Service : ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ : ಮೊದಲ ದಿನ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಎಷ್ಟು ಗೊತ್ತಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Free Bus Service : ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ : ಮೊದಲ ದಿನ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಎಷ್ಟು ಗೊತ್ತಾ..?

ಬೆಂಗಳೂರು : ಶಕ್ತಿ ಯೋಜನೆಗೆ( Free Bus service)  ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಲಕ್ಷಾಂತರ ಮಂದಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ.

ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಕೆ ಎಸ್ ಆರ್ ಟಿಸಿಯಲ್ಲಿ 1,93,831 ಮಹಿಳೆಯರು ಪ್ರಯಾಣಿಸಿದ್ದಾರೆ. ಪ್ರಯಾಣದ ಮೌಲ್ಯ ರೂ.58,16,178 ಆಗಿದೆ. ಅದೇ ರೀತಿ ಬಿಎಂಟಿಸಿಯಲ್ಲಿ 2,01,215 ಮಹಿಳೆಯರು ಪ್ರಯಾಣಿಸಿದ್ದಾರೆ. ರೂ.26,19,604 ಪ್ರಯಾಣದ ಮೌಲ್ಯವಾಗಿದೆ . KKRTCಯಲ್ಲಿ 53,623 ಮಂದಿ ಮಹಿಳೆಯರು ಪ್ರಯಾಣಿಸಿದ್ದು ರೂ.19,70,000 ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯವಾಗಿದೆ NWKRTCಯಲ್ಲಿ 1,22,354 ಮಹಿಳೆಯರು ಪ್ರಯಾಣಿಸಿದ್ದು ಅದರ ಮೌಲ್ಯ ರೂ.36,17,096 ಆಗಿದೆ ಎಂದು ತಿಳಿದು ಬಂದಿದೆ.

ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಲಕ್ಷಾಂತರ ಮಂದಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಿನ್ನೆ ಭಾನುವಾರ ಸಿಎಂ ಸಿದ್ದರಾಮಯ್ಯ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ ನೀಡಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...