
ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು 2022ರ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯಲಿವೆ. ಈ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಮರಳಿ ಹಿಂದಿರುಗುವಾಗ ಎಸ್.ಎಸ್.ಎಲ್.ಸಿ. ಪರೀಕ್ಷಾ ಪ್ರವೇಶಪತ್ರವನ್ನು ತೋರಿಸಿ ಸಂಸ್ಥೆಯ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಈ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಸ್ಥೆಯ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಕುರಿತು ನಿಗಮದ ವಾಹನ ಚಾಲಕರು ಹಾಗೂ ನಿರ್ವಾಹಕರಿಗೆ ಸೂಕ್ತ ನಿರ್ದೇಶನ ನೀಡಲಾಗಿದ್ದು, ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.