alex Certify ‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ : KSRTC ಸುತ್ತೋಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ : KSRTC ಸುತ್ತೋಲೆ

ಬೆಂಗಳೂರು : ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04,2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳುವುದು.

ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ಕೆಎಸ್ ಆರ್ ಟಿಸಿ ಸುತ್ತೋಲೆ ಹೊರಡಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...