ಚಂಡೀಗಢ: ಮಹಿಳೆಯರು ಬಾಲಕಿಯರಿಗೆ ಸರ್ಕಾರಿ ಬಸ್ ಗಳಲ್ಲಿ ಇಂದಿನಿಂದ ಉಚಿತ ಪ್ರಯಾಣಕ್ಕೆ ಪಂಜಾಬ್ ಸರ್ಕಾರ ಅವಕಾಶ ಕಲ್ಪಿಸಿದೆ.
ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಪಂಜಾಬ್ ನಲ್ಲಿ ಎಲ್ಲ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಮಾರ್ಚ್ ತಿಂಗಳ ಆರಂಭದಲ್ಲಿ ಘೋಷಿಸಲಾದ ಯೋಜನೆಗೆ ಬುಧವಾರ ಕ್ಯಾಬಿನೆಟ್ ಅನುಮೋದನೆ ನೀಡಿದೆ.
ಮಹಿಳೆಯರು ಬಾಲಕಿಯರನ್ನು ಸಬಲೀಕರಣಗೊಳಿಸುವ ಸರ್ಕಾರದ ಯೋಜನೆಯ ಭಾಗವಾಗಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ 1.31 ಕೋಟಿ ಮಹಿಳೆಯರು ಮತ್ತು ಬಾಲಕಿಯರ ಪ್ರಯೋಜನ ಪಡೆಯಲಿದ್ದಾರೆ.