ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ. ರಾಜಸ್ಥಾನ ಮತ್ತು ಪಂಜಾಬ್ ರಾಜ್ಯ ಸರ್ಕಾರಗಳು 18 ರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲು ತೀರ್ಮಾನ ಕೈಗೊಂಡಿದೆ.
ಈಗಾಗಲೇ ಅನೇಕ ರಾಜ್ಯಗಳಲ್ಲಿ ಉಚಿತವಾಗಿ ಲಸಿಕೆ ನೀಡುವ ನಿರ್ಧಾರ ಘೋಷಿಸಲಾಗಿದ್ದು, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರು ಭಾನುವಾರ ಉಚಿತವಾಗಿ ಲಸಿಕೆ ನೀಡುವ ತೀರ್ಮಾನ ಪ್ರಕಟಿಸಿದ್ದಾರೆ. ಇದಕ್ಕಾಗಿ ಮೂರು ಸಾವಿರ ಕೋಟಿ ರೂಪಾಯಿ ಕಾಯ್ದಿರಿಸಲಾಗಿದೆ ಎಂದು ಹೇಳಿದ್ದು, ಅನೇಕ ರಾಜ್ಯಗಳ ಬೇಡಿಕೆಯಂತೆ ಕೇಂದ್ರ ಸರ್ಕಾರವೇ ಲಸಿಕೆಯ ವೆಚ್ಚವನ್ನು ಭರಿಸಬೇಕೆಂದು ಅಶೋಕ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದಲ್ಲಿಯೂ ಉಚಿತವಾಗಿ ಲಸಿಕೆ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬಹುದು ಎಂದು ಹೇಳಲಾಗಿದೆ.