
ದಾವಣಗೆರೆ: 6 ನೇ ತರಗತಿಯಿಂದ 10 ನೇ ತರಗತಿವರೆಗೆ ಪ್ರತಿಷ್ಠಿತ ಶಾಲೆಗಳಲ್ಲಿ ಉಚಿತವಾಗಿ ಶಿಕ್ಷಣ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
5 ನೇ ತರಗತಿಯಲ್ಲಿ ಕನಿಷ್ಠ ಶೇ.60 ರಷ್ಟು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಶಾಲೆಗಳಲ್ಲಿ ದಾಖಲಿಸಿ, 6ನೇ ತರಗತಿಯಿಂದ 10 ನೇ ತರಗತಿವರೆಗೆ ಉಚಿತವಾಗಿ ಶಿಕ್ಷಣ ನೀಡಲಾಗುವುದು.
ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅಂದು ಸಂಜೆ 5.30 ರೊಳಗೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ www.sw.kar.nic.in ಮೂಲಕ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.