
ನವದೆಹಲಿ: ಕೋರೋನಾ ಸೋಂಕಿನಿಂದಾಗಿ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಮಾಸಿಕ ಸ್ಟೈಪೆಂಡ್ ನೀಡಲಾಗುತ್ತದೆ. 18 ವರ್ಷವಾಗುತ್ತಿದ್ದಂತೆ ಅವರಿಗೆ 10 ಲಕ್ಷ ರೂಪಾಯಿ ನೆರವು ನೀಡಲಾಗುತ್ತದೆ.
ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯಡಿ ಕೋವಿಡ್ ನಿಂದ ಹೆತ್ತವರನ್ನು ಕಳೆದುಕೊಂಡ 18 ರಿಂದ 23 ವರ್ಷದ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಮಾಸಿಕ ಸ್ಟೈಫಂಡ್ ನೀಡಲಾಗುವುದು. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಈ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ
ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಶಿಕ್ಷಣ ಸೇರಿದಂತೆ ಹಲವು ನೆರವು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಉಚಿತ ಶಾಲಾ ಶಿಕ್ಷಣ, ಉನ್ನತ ವ್ಯಾಸಂಗಕ್ಕೆ ಸಾಲ ಪಡೆಯಲು ಸಹಾಯ, ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಆರೋಗ್ಯ ರಕ್ಷಣೆ ಮತ್ತು ಮಾಸಿಕ ಸ್ಟೈಪಂಡ್ ನೀಡಲಾಗುವುದು ಎಂದು ಹೇಳಲಾಗಿದೆ.