
ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಿಪಿಎಲ್ ಕುಟುಂಬದವರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಉಚಿತವಾಗಿ ನೀಡಲಾಗುತ್ತಿದ್ದ ವಿದ್ಯುತ್ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಿಪಿಎಲ್ ಕುಟುಂಬಗಳಿಗೆ ಇಂಧನ ಇಲಾಖೆಯಿಂದ ಗಿಫ್ಟ್ ನೀಡಲಾಗಿದ್ದು, ಉಚಿತವಾಗಿ ನೀಡುತ್ತಿದ್ದ ವಿದ್ಯುತ್ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. 40 ಯುನಿಟ್ ನಿಂದ 75 ಯುನಿಟ್ ಗೆ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.