ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಸರ್ಕಾರ ಹೊಸ ನಿಬಂಧನೆ ಹಾಕಿದೆ. ಉಚಿತ ವಿದ್ಯುತ್ ಪಡೆದುಕೊಳ್ಳಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.
ಜೂನ್ ವರೆಗಿನ ಬಾಕಿ ವಿದ್ಯುತ್ ಬಿಲ್ ಪಾವತಿಗೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ. ಬಾಕಿ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಕಸ್ಟಮರ್ ಐಡಿಗೆ ಆಧಾರ್ ಜೋಡಣೆ ಕಡ್ಡಾಯವಾಗಿ ಮಾಡಬೇಕಿದೆ.