ಜೈಪುರ್: ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಭರಪೂರ ಭರವಸೆ ನೀಡಲಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ 2023 -24 ನೇ ಸಾಲಿನ ಬಜೆಟ್ ಮಂಡಿಸಿದ್ದು, ರೈತರಿಗೆ 2000 ಯೂನಿಟ್ ವರೆಗೆ ಸಂಪೂರ್ಣ ಉಚಿತವಾಗಿ ವಿದ್ಯುತ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
11 ಲಕ್ಷ ರೈತರಿಗೆ 2000 ಯೂನಿಟ್ ವರೆಗೆ ವಿದ್ಯುತ್ ಉಚಿತವಾಗಿ ಪೂರೈಕೆ ಮಾಡಲಾಗುವುದು. ಎಲ್ಲರಿಗೂ 100 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ. ಇದುವರೆಗೆ ರಾಜ್ಯದಲ್ಲಿ 50 ಯೂನಿಟ್ ಉಚಿತವಾಗಿ ವಿದ್ಯುತ್ ನೀಡುತ್ತಿದ್ದು, ಅದನ್ನು 100 ಯೂನಿಟ್ ಗೆ ಹೆಚ್ಚಳ ಮಾಡಲಾಗಿದೆ. ಉಜ್ವಲ ಯೋಜನೆ ಫಲಾನುಭವಿಗಳಿಗೆ 500 ರೂಪಾಯಿ ದರದಲ್ಲಿ ಎಲ್.ಪಿ.ಜಿ. ಸಿಲಿಂಡರ್ ವಿತರಿಸಲಾಗುವುದು. ರೈತರ ಸಾಲ ಮನ್ನಾ ಕಾಯ್ದೆ ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದಾರೆ.