alex Certify ನೇಕಾರರಿಗೆ ಗುಡ್ ನ್ಯೂಸ್: 10 HP ವರೆಗಿನ ಮಗ್ಗಗಳಿಗೆ ಸಂಪೂರ್ಣ ಉಚಿತ ವಿದ್ಯುತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೇಕಾರರಿಗೆ ಗುಡ್ ನ್ಯೂಸ್: 10 HP ವರೆಗಿನ ಮಗ್ಗಗಳಿಗೆ ಸಂಪೂರ್ಣ ಉಚಿತ ವಿದ್ಯುತ್

ಬೆಂಗಳೂರು: ಸಣ್ಣ ನೇಕಾರರಿಗೂ ಉಚಿತ ವಿದ್ಯುತ್ ನೀಡಲಾಗುವುದು. 10 ಹೆಚ್.ಪಿ.ವರೆಗಿನ ಮಗ್ಗಗಳಿಗೆ ಸಂಪೂರ್ಣ ವಿದ್ಯುತ್ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10ಹೆಚ್‌ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್ ನೀಡುವ ಯೋಜನೆ ಕಾರ್ಯ ರೂಪಕ್ಕೆ ತರಲು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಈ ಮಾಹಿತಿ ನೀಡಿದ್ದಾರೆ.

10 ಹೆಚ್.ಪಿ.ವರೆಗಿನ ಮಗ್ಗಗಳಿಗೆ ಉಚಿತ ವಿದ್ಯುತ್ ನೀಡಬೇಕೆಂಬ ಬೇಡಿಕೆ ಇದ್ದು, ಇದಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಈ ಹಿಂದೆ ನೇಕಾರರಿಗೆ ಉಚಿತ ವಿದ್ಯುತ್ ಭರವಸೆ ನೀಡಿದ್ದು, ಬಜೆಟ್ ನಲ್ಲಿಯೂ ಘೋಷಣೆ ಮಾಡಲಾಗಿದೆ. ಸಣ್ಣ ನೇಕಾರರಿಗೆ ಇದರಿಂದ ಸಾಕಷ್ಟು ಅನುಕೂಲವಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...