alex Certify ಉಚಿತ ಸೀರೆ ಪಡೆಯಲು ನೂಕು ನುಗ್ಗಲು ಉಂಟಾಗಿ 3 ಮಹಿಳೆಯರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಚಿತ ಸೀರೆ ಪಡೆಯಲು ನೂಕು ನುಗ್ಗಲು ಉಂಟಾಗಿ 3 ಮಹಿಳೆಯರು ಸಾವು

ಉಚಿತ ಸೀರೆ ಪಡೆಯಲು ನೂಕು ನುಗ್ಗಲು ಉಂಟಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಗುಂಟೂರಿನ ವಿಕಾಸ ನಗರದಲ್ಲಿ ನಡೆದಿದೆ.

ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಸೀರೆ ಹಂಚಲಾಗುತ್ತಿದ್ದು, ಈ ವೇಳೆ ಘಟನೆ ನಡೆದಿದೆ.

ತೆಲುಗು ದೇಶಂ ಪಕ್ಷದ ಮುಖ್ಯಸ್ಥರಾದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಂಕ್ರಾಂತಿ ಅಂಗವಾಗಿ ಸೀರೆ ಹಂಚಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನೂಕು ನುಗ್ಗಲಿನಲ್ಲಿ ಒಬ್ಬ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಡಿಸೆಂಬರ್ 28ರಂದು ಚಂದ್ರಬಾಬು ನಾಯ್ಡು ರ್ಯಾಲಿ ವೇಳೆ 8 ಕಾರ್ಯಕರ್ತರು ಸಾವನ್ನಪ್ಪಿದ್ದರು. ನೆಲ್ಲೂರು ಕ್ಷೇತ್ರದ ಕಂದುಕೂರಿನಲ್ಲಿ ನಡೆದಿದ್ದ ಚುನಾವಣೆ ರ್ಯಾಲಿಯಲ್ಲಿ ಎಂಟು ಜನ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಘಟನೆ ಮರುಕಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...