ನವದೆಹಲಿ: ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್ ಫೋನ್ ಯೋಜನೆ ಜಾರಿ ಬಗ್ಗೆ ಎಚ್ಚರದಿಂದಿರುವಂತೆ ಸರ್ಕಾರ ತಿಳಿಸಿದೆ.
ಸರ್ಕಾರ ಜನರಿಗೆ ಅನುಕೂಲವಾಗುವಂತೆ ಹಲವಾರು ಯೋಜನೆ ರೂಪಿಸಿ ಜಾರಿಗೊಳಿಸಿದೆ. ಆದಾಗ್ಯೂ, ಹಲವಾರು ವಂಚಕರು ತಪ್ಪುದಾರಿಗೆಳೆಯುವ ಮೂಲಕ ಜನರನ್ನು ಮರುಳು ಮಾಡಲು ಪ್ರಯತ್ನಿಸುತ್ತಾರೆ. ಡಿಜಿಟಲ್ ಯುಗದಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಪ್ಪುದಾರಿಗೆಳೆಯುವುದು ಹೆಚ್ಚಾಗಿದೆ.
‘ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್‌ಫೋನ್ ಯೋಜನೆ 2022’ ಅಡಿಯಲ್ಲಿ ಕಲಿಕೆಯನ್ನು ಬೆಂಬಲಿಸಲು ಶಿಕ್ಷಣ ಸಚಿವಾಲಯವು ದೇಶದಾದ್ಯಂತ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್ ಫೋನ್ ಗಳನ್ನು ನೀಡುತ್ತದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹರಿದಾಡುತ್ತಿವೆ.
ಸಂದೇಶದಲ್ಲಿ. ತಮ್ಮ ಕಲಿಕೆಗಾಗಿ ಸ್ಮಾರ್ಟ್ ಫೋನ್ ಸ್ವೀಕರಿಸುವ ಯಶಸ್ವಿ ವಿದ್ಯಾರ್ಥಿಗಳ ಭಾಗವಾಗಲು ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ.
ಪತ್ರಿಕಾ ಮಾಹಿತಿ ಬ್ಯೂರೋ(ಪಿಐಬಿ) ಫ್ಯಾಕ್ಟ್ ಚೆಕ್ ಮೂಲಕ, ಸರ್ಕಾರವು ಅಂತಹ ಯಾವುದೇ ಯೋಜನೆಯನ್ನು ನಡೆಸುತ್ತಿಲ್ಲ ಎಂದು ಈ ಕುರಿತಾದ ಸಂದೇಶವನ್ನು ತಳ್ಳಿಹಾಕಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಸಂದೇಶವೊಂದು @EduMinOfIndia ದೇಶಾದ್ಯಂತ ಎಲ್ಲರಿಗೂ ಉಚಿತ ಸ್ಮಾರ್ಟ್‌ಫೋನ್‌ಗಳನ್ನು ನೀಡುತ್ತದೆ ಎಂದು ಹೇಳುತ್ತದೆ. ಇದು ನಕಲಿಯಾಗಿದ್ದು, ಭಾರತ ಸರ್ಕಾರ ಅಂತಹ ಯಾವುದೇ ಯೋಜನೆಯನ್ನು ನಡೆಸುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ. ಇಂತಹ ನಕಲಿ ಸಂದೇಶಗಳ ಬಗ್ಗೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.