ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮಾರ್ಚ್ 9 ರಿಂದ 29 ರವರೆಗೆ ವಿದ್ಯಾರ್ಥಿಗಳ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು ಮತ್ತು ಟ್ರಿಪ್ ಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಹೆಚ್ಚುವರಿ ಟ್ರಿಪ್ ಗಳ ಕಾರ್ಯಾಚರಣೆ ಅಗತ್ಯತೆ ಕಂಡು ಬಂದಲ್ಲಿ ಹೆಚ್ಚುವರಿ ಬಸ್ ಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಸಮೀಪ ವಿದ್ಯಾರ್ಥಿಗಳು, ಪೋಷಕರು ಕೋರಿದಲ್ಲಿ ನಿಲುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತಾಗಿ ಬಿಎಂಟಿಸಿ ಚಾಲಕರು ಮತ್ತು ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ.