ಬೆಳಗಾವಿ: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24 ಗಂಟೆ ಸೇವೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ನಗರ ಮತ್ತು ಗ್ರಾಮಾಂತರ ಜನರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಉನ್ನತೀಕರಣಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ವಿಲೀನಕ್ಕೆ ಕೂಡ ಚಿಂತನೆ ನಡೆಸಲಾಗಿದೆ. ಕೊರೋನಾ ನಂತರ ರಾಜ್ಯದಲ್ಲಿ ವೈದ್ಯಕೀಯ ಮೂಲಸೌಕರ್ಯ ವೃದ್ಧಿಯಾಗಿದೆ. ವೈದ್ಯಕೀಯ ಸೇವೆಯ ಸುಧಾರಣೆಗೆ ದಾರಿ ಮಾಡಿಕೊಟ್ಟಿದೆ. ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಸಿಟಿ ಸ್ಕ್ಯಾನ್, ರಕ್ತಪರೀಕ್ಷೆ ಸೇರಿದಂತೆ ಎಲ್ಲಾ ಮಾದರಿಯ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ನಡೆಸಲಾಗುವುದು. ಜನವರಿಯಿಂದ ಹೊಸ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.