ಬೆಂಗಳೂರು : ಶಕ್ತಿ ಯೋಜನೆಯಡಿ ಜೂನ್ 11ರಿಂದ 48.50 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದ ನಂತರ ಮಾತನಾಡಿದ ಸಿದ್ದರಾಮಯ್ಯ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜೂನ್ 11ರಿಂದ 48.50 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜುಲೈ 10ರಂದು ಅನ್ನಭಾಗ್ಯ ಯೋಜನೆಗೆ ಅಧಿಕೃತ ಚಾಲನೆ ನೀಡಿದ್ದೆವು. ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸಿತ್ತು, ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.ಇದೇ ವೇಳೆ ಕಳೆದ 100 ದಿನಗಳಲ್ಲಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ.