ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯಲ್ಲಿ, ಸೆಪ್ಟೆಂಬರ್, 01 ರಿಂದ ಯಶಸ್ವಿನಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ಈ ಯೋಜನೆಯಡಿ ಕೊಡಗು ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಚಿಕಿತ್ಸೆಗೆ ದಾಖಲಾಗುವ ರಾಜ್ಯದ ಸಹಕಾರ ಸಂಘಗಳ ಸದಸ್ಯರು ತಮ್ಮ ಯಶಸ್ವಿನಿ ಯೋಜನೆಯ ಗುರುತಿನ ಚೀಟಿ, ಆಧಾರ್ ಕಾರ್ಡ್ ಪ್ರತಿ ತೋರಿಸಿ ಚಿಕಿತ್ಸೆಗಳನ್ನು ಸಂಪೂರ್ಣ ಉಚಿತವಾಗಿ ಪಡೆಯಬಹುದು.
ಆಸ್ಪತ್ರೆಯಲ್ಲಿ ಯೋಜನೆಯಡಿ ಲಭ್ಯವಿರುವ ಚಿಕಿತ್ಸೆಗಳ ವಿವರ: ಮಂಡಿಚಿಪ್ಪಿನ ಶಸ್ತ್ರಚಿಕಿತ್ಸೆ, ಕೀ ಹೋಲ್ ಶಸ್ತ್ರ ಚಿಕಿತ್ಸೆಗಳು, ಎಲ್ಲಾ ರೀತಿಯ ಹರ್ನಿಯಾ ಶಸ್ತ್ರಚಿಕಿತ್ಸೆಗಳು, ಮೂಳೆ ಮುರಿತಕ್ಕೆ ಮಾಡುವ ಎಲ್ಲಾ ರೀತಿಯ ಶಸ್ತ್ರಚಿಕಿತ್ಸೆಗಳು, ಗರ್ಭಿಣಿಯರ ಆರೈಕೆ ಹಾಗೂ ಸಿಸೇರಿಯನ್ ಶಸ್ತ್ರ ಚಿಕಿತ್ಸೆಗಳು ಮತ್ತು ಇನ್ನೂ 1250 ಕ್ಕೂ ಹೆಚ್ಚಿನ ಚಿಕಿತ್ಸೆಗಳು ನಮ್ಮ ಆಸ್ಪತ್ರೆಯಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ ಆಸ್ಪತ್ರೆಯ ಯಶಸ್ವಿನಿ ಯೋಜನೆಯ ಕೌಂಟರ್ನ ಸಿಬ್ಬಂದಿಗಳನ್ನು ಹಾಗೂ ಆಸ್ಪತ್ರೆಯ ಎಲ್ಲಾ ಆರೋಗ್ಯ ವಿಮಾ ಯೋಜನೆಗಳ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರು ತಿಳಿಸಿದ್ದಾರೆ.