ಬೆಂಗಳೂರು: ರಾಜ್ಯ ವಸತಿ ನಿಗಮದ ವತಿಯಿಂದ 10 ಲಕ್ಷ ಕುಟುಂಬಗಳಿಗೆ ಉಚಿತವಾಗಿ ಮನೆ ವಿತರಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಆರ್ಥಿಕವಾಗಿ ಹಿಂದುಳಿದ 10 ಲಕ್ಷ ಕುಟುಂಬಗಳಿಗೆ ಉಚಿತವಾಗಿ ಮನೆ ನೀಡಲು ಸರ್ಕಾರ ಬದ್ಧವಾಗಿದೆ. ಕಾಮಗಾರಿ ಭರದಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಗೋವಿಂದರಾಜ ನಗರ ವಾರ್ಡ್ ವ್ಯಾಪ್ತಿಯಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೈದಾನದಲ್ಲಿ ಶ್ರೀಗಳ ಕಂಚಿನ ಪ್ರತಿಮೆ ಪ್ರತಿಷ್ಠಾಪನೆ ಕಾಮಗಾರಿ ಹಿನ್ನಲೆ ಹಳೆಯ ಪ್ರತಿಮೆ ತೆರವು ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡವರಿಗೆ ಸೂರು ಒದಗಿಸುವ ಯೋಜನೆ ರೂಪಿಸಿದೆ. ಕಡಿಮೆ ವೆಚ್ಚದಲ್ಲಿ ಮನೆಗಳನ್ನು ನೋಂದಣಿ ಮಾಡಿಕೊಡಲಾಗುವುದು. ಆರ್ಥಿಕವಾಗಿ ಹಿಂದುಳಿದ 10 ಲಕ್ಷ ಕುಟುಂಬಗಳಿಗೆ ಉಚಿತವಾಗಿ ಮನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.