ಬೆಂಗಳೂರು: ಉಚಿತವಾಗಿ ಪೂರೈಸಬೇಕಿದ್ದ ನೀರನ್ನು ಖಾಸಗಿಯವರಿಗೆ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಉಚಿತವಾಗಿ ನೀರು ಪೂರೈಸುವುದಕ್ಕಾಗಿ ಮಂಡಳಿಯು ಖಾಸಗಿ ಯಾಂಕರ್ ನ್ನು ತಾತ್ಕಾಲಿಕವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿತ್ತು. ಅದರಂತೆ ನೀರು ಪೂರೈಸಲು ಟ್ಯಾಂಕರ್ ಚಾಲಕನಿಗೆ ಸೂಚಿಸಲಾಗಿತ್ತು. ಆದರೆ ಟ್ಯಾಂಕರ್ ಚಾಲಕ ವಾರ್ಡ್ ಸಂಖ್ಯೆ 130ಕ್ಕೆ ಉಚಿತ ನೀರು ಪೂರೈಸುವ ಬದಲು ಆ ನೀರನ್ನು ವಾಣಿಜ್ಯ ಉದ್ದೇಶಕ್ಕಾಗಿ ವಾರ್ಡ್ ಸಂಖ್ಯೆ 14ರಲ್ಲಿನ ಸಂಸ್ಥೆಗೆ ಮಾರಾಟ ಮಾಡಿದ್ದ. ಈ ಹಿನ್ನೆಲೆಯಲ್ಲಿ ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಜಲಮಂಡಳಿ ತಿಳಿಸಿದೆ.