
ಕಾರವಾರ: ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ವೆಂಕಣ್ಣ ನಾಯಕ(102) ನಿಧನರಾಗಿದ್ದಾರೆ. ಸೂರ್ವೆ ಗ್ರಾಮದ ತಮ್ಮ ನಿವಾಸದಲ್ಲಿ ವೆಂಕಣ್ಣ ನಾಯಕ ಕೊನೆಯುಸಿರೆಳೆದಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಸುರ್ವೇ ಗ್ರಾಮದಲ್ಲಿ ಅವರು ನಿಧನರಾಗಿದ್ದಾರೆ. ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧು, ಬಳಕವನ್ನು ಅಗಲಿದ್ದಾರೆ. ಉಪ್ಪಿನ ಸತ್ಯಾಗ್ರಹ, ಕರ ಬಂಧಿ ಹೋರಾಟದಲ್ಲಿ ಅವರು ಭಾಗವಹಿಸಿದ್ದರು.
ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದ ಅವರನ್ನು ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಸನ್ಮಾನಿಸಲಾಗಿತ್ತು, ಉತ್ತರ ಕನ್ನಡ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಸನ್ಮಾನಿಸಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಣ್ಣನಾಯಕ ವಿಧಿವಶರಾಗಿದ್ದಾರೆ.