ಚನ್ನಪಟ್ಟಣ : ಸ್ವಾತಂತ್ರ್ಯವೆಂದರೆ ನಮಗೆ ಇಷ್ಟಬಂದದ್ದನ್ನು ಮಾಡುವುದಲ್ಲ, ಬದಲಾಗಿ ಜನರಿಗೆ ಒಳ್ಳೆಯದನ್ನು ಮಾಡುವುದು ಎಂದು ಲೋಹಿಯಾ ಅವರು ಹೇಳಿದ್ದಾರೆ. ಸ್ವಾತಂತ್ರ್ಯ ಎಂದರೆ ಬೆಲೆ ಕಟ್ಟಿ ಪಡೆಯುವ ವಸ್ತುವಲ್ಲ, ಅದು ಪ್ರತಿಯೊಬ್ಬರ ಬದುಕಿನ ಉಸಿರು ಎಂದು ಮಹಾತ್ಮ ಗಾಂಧೀಜಿ ಅವರು ಹೇಳಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಇಂದು ಹಮ್ಮಿಕೊಂಡಿದ್ದ 78ನೇ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸ್ವಾತಂತ್ರ್ಯವೆಂದರೆ ನಮಗೆ ಇಷ್ಟಬಂದದ್ದನ್ನು ಮಾಡುವುದಲ್ಲ, ಬದಲಾಗಿ ಜನರಿಗೆ ಒಳ್ಳೆಯದನ್ನು ಮಾಡುವುದು ಎಂದು ಲೋಹಿಯಾ ಅವರು ಹೇಳಿದ್ದಾರೆ. ಸ್ವಾತಂತ್ರ್ಯ ಎಂದರೆ ಬೆಲೆ ಕಟ್ಟಿ ಪಡೆಯುವ ವಸ್ತುವಲ್ಲ, ಅದು ಪ್ರತಿಯೊಬ್ಬರ ಬದುಕಿನ ಉಸಿರು ಎಂದು ಮಹಾತ್ಮ ಗಾಂಧೀಜಿ ಅವರು ಹೇಳಿದ್ದಾರೆ.
ಲಕ್ಷಾಂತರ ಜನರು ಹೋರಾಟ ಮಾಡಿ ತ್ಯಾಗ, ಬಲಿದಾನದ ಮೂಲಕ ನಮಗೆ ಸ್ವಾತಂತ್ರ್ಯ ಸಿಗುವಂತೆ ಮಾಡಿದ್ದಾರೆ. ಅವರೆಲ್ಲರ ಪರಿಶ್ರಮ, ತ್ಯಾಗಕ್ಕೆ ಅನಂತ ನಮನಗಳು. ಚನ್ನಪಟ್ಟಣಕ್ಕೆ ಬಂದು ಧ್ವಜಾರೋಹಣ ಮಾಡಲು ಅವಕಾಶ ಸಿಕ್ಕಿರುವುದು ನನ್ನ ಪುಣ್ಯ.ರಾಮನಗರ ಜಿಲ್ಲೆಯನ್ನು ಮರುನಾಮಕರಣ ಮಾಡಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಘೋಷಿಸಲು ನಾವು ಸಿದ್ಧತೆ ಮಾಡಿಕೊಂಡಿದ್ದು ಸಂಪುಟದಲ್ಲೂ ಸಹ ಒಪ್ಪಿಗೆ ಸಿಕ್ಕಿದೆ. ಚನ್ನಪಟ್ಟಣದಲ್ಲಿ ಹಲವು ನೀರಾವರಿ ಯೋಜನೆಗಳನ್ನು ತರಲು ನಾವು ಬದ್ಧರಾಗಿದ್ದೇವೆ. ಇದಲ್ಲದೆ ವಸತಿ ರಹಿತರಿಗೆ ನಿವೇಶನ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಚನ್ನಪಟ್ಟಣದ ಅಭಿವೃದ್ಧಿಗೆಂದೇ ನಾನು ಬಂದಿದ್ದೇನೆ. ಅದನ್ನು ಮಾಡಿಯೇ ತೀರುತ್ತೇನೆ ಎಂದು ತಿಳಿಸಿದರು.