ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಪುತ್ರಿ ಟಿ.ಆರ್.ಎಸ್. ಪಕ್ಷದ ನಾಯಕಿ ಕೆ. ಕವಿತಾ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ದೆಹಲಿಯಲ್ಲಿ ಮದ್ಯ ನೀತಿ ಪರಿಷ್ಕರಣೆ ವಿಚಾರದಲ್ಲಿ ಡಿಸೆಂಬರ್ 11 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 11 ರಂದು ಹೈದರಾಬಾದ್ ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿಆರ್‌ಎಸ್ ಎಂಎಲ್‌ಸಿ ಕವಿತಾ ಅವರಿಗೆ ಸಿಬಿಐ ಹೊಸ ನೋಟಿಸ್ ಜಾರಿ ಮಾಡಿದೆ.
ಡಿಸೆಂಬರ್ 11-15 ರ ನಡುವೆ ಯಾವುದೇ ದಿನಾಂಕಕ್ಕೆ ವಿಚಾರಣೆ ಮುಂದೂಡುವಂತೆ ಕವಿತಾ ಅವರ ಮನವಿಗೆ ಸಿಬಿಐ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.
ಡಿಸೆಂಬರ್ 2 ರಂದು ನೀಡಲಾದ ಮೊದಲ ನೋಟೀಸ್‌ಗೆ ಪ್ರತಿಕ್ರಿಯೆಯಾಗಿ ಕವಿತಾ ಅವರು ಎಫ್‌ಐಆರ್ ಪ್ರತಿ ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ವೆಬ್ ಸೈಟ್ ನಲ್ಲಿ ಲಭ್ಯವಿರುವ ದೂರನ್ನು ನೋಡಿದ್ದೇನೆ. ಯಾವುದೇ ರೀತಿಯಲ್ಲಿ ತನ್ನ ಹೆಸರು ಎಲ್ಲಿಯೂ ಕಂಡುಬಂದಿಲ್ಲ ಎಂದು ಹೇಳಿದ್ದರು.