ಮೈಸೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಮೈಸೂರಿನ ಬೀಡಿ ಕಾಲೋನಿಯಲ್ಲಿ ನಡೆದಿದೆ.
ಮುದಾಸಿರ್ ಪಾಷಾ(38) ಕೊಲೆಯಾದ ವ್ಯಕ್ತಿ. ಆರೋಪಿ ರಿಜ್ವಾನ್ ಕುಡಿದ ಮತ್ತಿನಲ್ಲಿ ಕಲ್ಲು ಎತ್ತಿ ಹಾಕಿ ಸ್ನೇಹಿತನ ಕೊಲೆ ಮಾಡಿದ್ದಾನೆ. ಹತ್ಯೆ ಮಾಡಿದ ಬಳಿಕ ಶವದ ಪಕ್ಕದಲ್ಲಿಯೇ ಮಲಗಿದ್ದಾನೆ. ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.