alex Certify ಸಾವಿನಲ್ಲೂ ಒಂದಾದ ಸ್ನೇಹಿತರು: ಗೆಳೆಯನ ಸಾವಿನ ಸುದ್ದಿ ಕೇಳಿ ಹೃದಯಾಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾವಿನಲ್ಲೂ ಒಂದಾದ ಸ್ನೇಹಿತರು: ಗೆಳೆಯನ ಸಾವಿನ ಸುದ್ದಿ ಕೇಳಿ ಹೃದಯಾಘಾತ

ಶಿವಮೊಗ್ಗ: ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಸುದ್ದಿ ತಿಳಿದ ಸ್ನೇಹಿತನೂ ಹೃದಯದಾತದಿಂದ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಪುಣೆದಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಆನಂದ್(30), ಸಾಗರ್(35) ಎಂದು ಗುರುತಿಸಲಾಗಿದೆ. ಆನಂದ್ ಮತ್ತು ನಟರಾಜ್ ಅವರು ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಆನಂದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ನಟರಾಜ್ ಪಾರಾಗಿದ್ದಾರೆ. ಆನಂದ್ ಅಪಘಾತದಲ್ಲಿ ಮೃತಪಟ್ಟ ಸುದ್ದಿ ತಿಳಿದ ಸಾಗರ್ ಗೆ ಹೃದಯಾಘಾತವಾಗಿದ್ದು, ಅವರೂ ಸಾವನ್ನಪ್ಪಿದ್ದಾರೆ.

ಸ್ನೇಹಿತರಿಬ್ಬರು ಸಾವಿನಲ್ಲೂ ಒಂದಾಗಿದ್ದು, ಗ್ರಾಮಸ್ಥರು ಅಕ್ಕಪಕ್ಕದಲ್ಲಿ ಇಬ್ಬರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಇಬ್ಬರ ಸಾವಿಗೆ ಸ್ನೇಹಿತರು, ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...