alex Certify Shocking: ಗೆಳತಿ ಆತ್ಮಹತ್ಯೆಗೆ ಶರಣಾದ ವಿಷಯ ತಿಳಿಯುತ್ತಿದ್ದಂತೆಯೇ ಕಟ್ಟಡದಿಂದ ಹಾರಿ ಸಾವನ್ನಪ್ಪಿದ ಯುವತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಗೆಳತಿ ಆತ್ಮಹತ್ಯೆಗೆ ಶರಣಾದ ವಿಷಯ ತಿಳಿಯುತ್ತಿದ್ದಂತೆಯೇ ಕಟ್ಟಡದಿಂದ ಹಾರಿ ಸಾವನ್ನಪ್ಪಿದ ಯುವತಿ

ತನ್ನ ಬಾಲ್ಯದ ಗೆಳತಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆಯೇ 19 ವರ್ಷದ ಯುವತಿ, ಅದೇ ಕಟ್ಟಡದಿಂದ ಹಾರಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಮಂಗಳವಾರ ಸಂಜೆ 6-30 ರ ಸುಮಾರಿಗೆ 19 ವರ್ಷದ ಯುವತಿ ಅಪಾರ್ಟ್ಮೆಂಟ್ ನಲ್ಲಿರುವ ತನ್ನ ಮನೆಯಲ್ಲಿಯೇ ಸಾವಿಗೆ ಶರಣಾಗಿರುವ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಆಕೆಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದರು.

ಇದಾದ ಕೇವಲ ಒಂದು ಗಂಟೆಯ ಅವಧಿಯಲ್ಲಿ ಆತ್ಮಹತ್ಯೆಗೆ ಶರಣಾದ ಯುವತಿಯ ಬಾಲ್ಯ ಸ್ನೇಹಿತೆ ಅದೇ ಕಟ್ಟಡದ ಮೇಲಿಂದ ಹಾರಿ ಸಾವನ್ನಪ್ಪಿದ್ದಾಳೆ. ಇವರಿಬ್ಬರೂ ಬಾಲ್ಯದಿಂದಲೂ ಆತ್ಮೀಯ ಗೆಳತಿಯರಾಗಿದ್ದರು ಎಂದು ಹೇಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...