alex Certify ಸಿಎಂ ಹುದ್ದೆಯಲ್ಲಿದ್ದಾಗಲೇ ಸೆರೆಯಾದ ಮೊದಲ ವ್ಯಕ್ತಿ ಕೇಜ್ರಿವಾಲ್: ಇಲ್ಲಿದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂಧಿತರಾದವರ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಹುದ್ದೆಯಲ್ಲಿದ್ದಾಗಲೇ ಸೆರೆಯಾದ ಮೊದಲ ವ್ಯಕ್ತಿ ಕೇಜ್ರಿವಾಲ್: ಇಲ್ಲಿದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂಧಿತರಾದವರ ಮಾಹಿತಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ಭ್ರಷ್ಟಾಚಾರ ವಿರೋಧಿಸಿ ಹೋರಾಟ ನಡೆಸಿ ಅಧಿಕಾರಕ್ಕೇರಿದ ಕೇಜ್ರಿವಾಲ್ ಭ್ರಷ್ಟಾಚಾರದ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಅಧಿಕಾರದಲ್ಲಿದ್ದಾಗಲೇ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಒಳಗಾಗಿದ್ದು, ಮುಖ್ಯಮಂತ್ರಿ ಹುದ್ದೆಯಲ್ಲಿದ್ದಾಗ ಬಂಧಿಸಸಲ್ಪಟ್ಟ ದೇಶದ ಮೊದಲ ನಾಯಕ ಎನ್ನುವ ಕುಖ್ಯಾತಿಗೆ ಒಳಗಾಗಿದ್ದಾರೆ.

ಈ ಹಿಂದೆ ರಾಜೀನಾಮೆ ನೀಡಿ ನಂತರ ಬಂಧನಕ್ಕೆ ಒಳಗಾದ ಮುಖ್ಯಮಂತ್ರಿಗಳು

ಮಧು ಕೋಡಾ

ಶಿಬು ಸೊರೆನ್

ಜಯಲಲಿತಾ

ಲಾಲು ಪ್ರಸಾದ್ ಯಾದವ್

ಹೇಮಂತ್ ಸೊರೆನ್

ಓಂ ಪ್ರಕಾಶ್ ಚೌಟಾಲ

ಚಂದ್ರಬಾಬು ನಾಯ್ಡು

ಎಂ. ಕರುಣಾನಿಧಿ

ಚರಣ್ ಸಿಂಗ್

ಬಿ.ಎಸ್. ಯಡಿಯೂರಪ್ಪ

ಜಾರ್ಖಂಡ್ ನಲ್ಲಿ ಮೂವರು ಮಾಜಿ ಸಿಎಂಗಳ ಬಂಧನ

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೇನ್ ಅವರನ್ನು ಜನವರಿ 31 ರಂದು ಜಾರಿ ನಿರ್ದೇಶನಾಲಯ (ಇಡಿ) ತನ್ನ ರಾಜ್ಯದಲ್ಲಿನ ಭೂ ಹಗರಣದ ಹಣ ವರ್ಗಾವಣೆಯ ತನಿಖೆಗೆ ಸಂಬಂಧಿಸಿದಂತೆ ಬಂಧಿಸಿತು. ಬಂಧನಕ್ಕೂ ಮುನ್ನ ಸೋರೆನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಿರಿಯ ಸಚಿವ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದೆ.

ಹೇಮಂತ್ ಸೊರೆನ್ ಅವರು ಬಂಧನಕ್ಕೊಳಗಾದ ಜಾರ್ಖಂಡ್‌ನ ಮೂರನೇ ಮಾಜಿ ಸಿಎಂ; ಅವರಿಗಿಂತ ಮೊದಲು ಮಧು ಕೋಡಾ ಮತ್ತು ಶಿಬು ಸೋರೆನ್ ಅವರನ್ನು ಬಂಧಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೋರೆನ್ ಅವರನ್ನು ಬಂಧಿಸಲಾಗಿದೆ.

ಲಾಲು ಪ್ರಸಾದ್ ಯಾದವ್ (ಬಿಹಾರ)

ಜಾನುವಾರುಗಳ ಮೇವು ಖರೀದಿಗೆ ಮೀಸಲಿಟ್ಟ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರನ್ನು ಕಂಬಿ ಹಿಂದೆ ಹಾಕಲಾಗಿತ್ತು. ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಅವರನ್ನು 1997 ರಲ್ಲಿ ಮೊದಲ ಬಾರಿಗೆ ಮೇವು ಹಗರಣದಲ್ಲಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾಯಿತು. ಪ್ರತಿಪಕ್ಷಗಳ ಒತ್ತಡದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಅವರ ಪತ್ನಿ ರಾಬ್ರಿ ದೇವಿ ಅವರನ್ನು ಸಿಎಂ ಆಗಿ ನೇಮಿಸಲಾಯಿತು.

ಜೆ. ಜಯಲಲಿತಾ (ತಮಿಳುನಾಡು)

ತಮಿಳುನಾಡಿನ ದಿವಂಗತ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ತಮ್ಮ ಅಧಿಕಾರಾವಧಿಯಲ್ಲಿ ತಮ್ಮ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಸಂಗ್ರಹಿಸಿದ್ದಾರೆ. ಭಾರಿ ಪ್ರಮಾಣದ ಆಸ್ತಿಗಳು, ಆಭರಣಗಳು ಮತ್ತು ಇತರ ಆಸ್ತಿಗಳನ್ನು ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 2014 ರಲ್ಲಿ ತಪ್ಪಿತಸ್ಥರೆಂದು ನಿರ್ಣಯಿಸಲಾಯಿತು. 4 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಇದರಿಂದ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಯಿತು.

ಓಂ ಪ್ರಕಾಶ್ ಚೌತಾಲ (ಹರಿಯಾಣ)

ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ಅವರು 2000 ರ ದಶಕದ ಆರಂಭದಲ್ಲಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ್ದರು. ಮಾಜಿ ಉಪಪ್ರಧಾನಿ ಚೌಧರಿ ದೇವಿ ಲಾಲ್ ಅವರ ಪುತ್ರ, ಇಂಡಿಯನ್ ನ್ಯಾಷನಲ್ ಲೋಕ ದಳ(INLD) ಮುಖ್ಯಸ್ಥ ಓಂ ಪ್ರಕಾಶ್ ಚೌಟಾಲಾ 2022 ರಲ್ಲಿ ಶಿಕ್ಷೆಗೊಳಗಾದರು ಜುಲೈ 24, 1999 ರಿಂದ ಮಾರ್ಚ್ 5, 2005 ರವರೆಗೆ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದ ಮೇಲೆ ಜೈಲು ಸೇರಿದ್ದರು.

ಮಧು ಕೋಡಾ (ಜಾರ್ಖಂಡ್)

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರು ತಮ್ಮ ಅಧಿಕಾರಾವಧಿಯಲ್ಲಿ ಭ್ರಷ್ಟಾಚಾರದ ಆರೋಪದಲ್ಲಿ ಜೈಲು ಸೇರಿದ್ದರು. ಕೊಡಾ ಗಣಿ ಹಗರಣದಲ್ಲಿ ಭಾಗಿಯಾಗಿದ್ದರು ಮತ್ತು ಲಂಚಕ್ಕಾಗಿ ಗಣಿಗಾರಿಕೆ ಗುತ್ತಿಗೆಯನ್ನು ನೀಡಿದ್ದರು ಎಂದು ಆರೋಪಿಸಲಾಗಿದೆ. 2009 ರಲ್ಲಿ ಬಂಧನದ ನಂತರ, ಅವರು 2013 ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದರು. ಆದರೆ ಅವರ 144 ಕೋಟಿ ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಪ್ತಿ ಮಾಡಲಾಯಿತು. 2017 ರಲ್ಲಿ, ಅವರು ಅಪರಾಧಿ ಎಂದು ಸಾಬೀತಾಯಿತು ಮತ್ತು 25 ಲಕ್ಷ ರೂಪಾಯಿ ದಂಡದೊಂದಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. 2006 ರಿಂದ 2008 ರವರೆಗೆ ರಾಜ್ಯವನ್ನು ನಿರ್ವಹಿಸಿದ ಜಾರ್ಖಂಡ್‌ನ ಕಿರಿಯ ಮುಖ್ಯಮಂತ್ರಿ ಮಧು ಕೋಡಾ ಅವರನ್ನು 2009 ರಲ್ಲಿ ಬಂಧಿಸಲಾಯಿತು.

ಚಂದ್ರಬಾಬು ನಾಯ್ಡು (ಆಂಧ್ರಪ್ರದೇಶ)

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಸೆಪ್ಟೆಂಬರ್ 9, 2023 ರಂದು ಕೌಶಲ್ಯ ಅಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಬಂಧಿಸಲಾಯಿತು.

ಶಿಬು ಸೊರೆನ್ (ಜಾರ್ಖಂಡ್)

ಡಿಸೆಂಬರ್ 5, 2006 ರಂದು, ದೆಹಲಿ ನ್ಯಾಯಾಲಯವು ಹೇಮಂತ್ ಸೊರೆನ್ ಅವರ ತಂದೆ ಶಿಬು ಸೊರೆನ್ ಅವರಿಗೆ 1994 ರಲ್ಲಿ ಅವರ ಖಾಸಗಿ ಕಾರ್ಯದರ್ಶಿ ಶಶಿ ನಾಥ್ ಝಾ ಅವರ ಅಪಹರಣ ಮತ್ತು ಕೊಲೆಯಲ್ಲಿನ ಪಾತ್ರಕ್ಕಾಗಿ ಜೀವಾವಧಿ ಶಿಕ್ಷೆಯನ್ನು ವಿಧಿಸಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...