alex Certify ಇಂದಿನಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬರ ಅಧ್ಯಯನ ಪ್ರವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬರ ಅಧ್ಯಯನ ಪ್ರವಾಸ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಈಗಾಗಲೇ ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಇಂದಿನಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಹ ಬರ ಅಧ್ಯಯನ ಪ್ರವಾಸ ನಡೆಸಲಿದ್ದಾರೆ.

ಇಂದಿನಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬರ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮತ್ತು ನಾಳೆ ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಬರ ಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.

ಮಂಗಳವಾರ ತುಮಕುರು ಜಿಲ್ಲೆಯ ಗುಬ್ಬಿ ಮತ್ತು ಸಿರಾ ವಿಧಾನಸಭೆ ಕ್ಷೇತ್ರಗಳ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಜೊತೆಗೆ ಮುಖಾಮುಖಿ ಚರ್ಚೆ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...