
ಕಲಬುರಗಿ : ಇಂದಿನಿಂದ ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾಜ್ಯದ ಹಲವಡೆ ಬರ ವೀಕ್ಷಣೆ ಮಾಡಲಿದ್ದು, ಇಂದು ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ವಿಪಕ್ಷ ನಾಯಕರಾದ ಬಳಿಕ ಮೊದಲ ಬಾರಿಗೆ ಆರ್. ಅಶೋಕ್ ಅವರು ಕಲಬುರಗಿ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 9:30ಕ್ಕೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಲ್ಲಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ಶ್ರೀನಿವಾಸ ಸರಡಗಿಯಲ್ಲಿ ಬರ ವೀಕ್ಷಣೆ ಮಾಡುತ್ತಾರೆ. ಬಳಿಕ ಆಳಂದ ತಾಲೂಕಿಗೆ ಭೇಟಿ ನೀಡಿ ಕಡಗಂಚಿ ಗ್ರಾಮದಲ್ಲಿ ಬರ ವೀಕ್ಷಣೆ ಮಾಡಲಿದ್ದಾರೆ.