ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಾಮತಿ ಪ್ರದೇಶದ ಚಂದನ್ ನರೇಶ್ ಚೌಧರಿ ಬಂಧಿತ ಆರೋಪಿಯಾಗಿದ್ದಾನೆ.
ಈತ ಹಣ್ಣು ಮತ್ತು ಐಸ್ ಕ್ರೀಮ್ ಮಾರಾಟ ಮಾಡುತ್ತಿದ್ದ. ನಂತರ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಕಳೆದ 5 ವರ್ಷಗಳಿಂದ ಓಂ ನಾರಾಯಣ ವಿವಿಧೋದ್ದೇಶ ಸೊಸೈಟಿ ಎಂಬ ಚಾರಿಟೇಬಲ್ ಔಷಧಾಲಯವನ್ನು ಕೂಡ ಈತ ನಡೆಸುತ್ತಿದ್ದ. ರೋಗಿಗಳಿಗೆ ಆಯುರ್ವೇದ ಪ್ರಕೃತಿ ಚಿಕಿತ್ಸೆ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕೊರೋನಾ ಸಾಂಕ್ರಾಮಿಕ ರೋಗದ ಪರಿಸ್ಥಿತಿಯ ಲಾಭ ಪಡೆದುಕೊಂಡ ಈ ನಕಲಿ ವೈದ್ಯ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಅನೇಕ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಆರಂಭಿಸಿದ್ದಾನೆ ಈತನ ಬಗ್ಗೆ ಪೊಲೀಸರಿಗೆ ಮಾಹಿತಿ ಗೊತ್ತಾಗಿದ್ದು ದಾಳಿ ನಡೆಸಿ ಬಂಧಿಸಲಾಗಿದೆ. ಔಷಧಾಲಯದಲ್ಲಿದ್ದ ಆಮ್ಲಜನಕ ಸಿಲಿಂಡರ್ ಸಿರಿಂಜ್ ಮತ್ತು ಇತರೆ ವೈದ್ಯಕೀಯ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.