ಬೆಂಗಳೂರು : ಶೀಘ್ರವೇ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಇಂದು ಶೇಷಾದ್ರಿಪುರಂನಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮಿತ್ರ ಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಹೊರಗುತ್ತಿಗೆ ನೌಕರರ ರಾಜ್ಯ ಮಟ್ಟದ ಸಮಾವೇಶದಲ್ಲಿ ಭಾಗವಹಿಸಿ ಗುತ್ತಿಗೆ ನೌಕರರ ಅಹವಾಲುಗಳನ್ನು ಆಲಿಸಿದರು.
ನಂತರ ಮಾತನಾಡಿದ ಸಚಿವರು ‘ ಹೊರಗುತ್ತಿಗೆ ನೌಕರರ ಸಂಘವು ಆರೋಗ್ಯ ಸುರಕ್ಷಾ ವಿಮೆ ಸೇರಿದಂತೆ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದು ಶೀಘ್ರವಾಗಿ ಸೂಕ್ತ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಹೇಳಿದರು.